31.5.09

ಪ್ರಮೀಳೆಯರಿಲ್ಲದ ಪ್ರಪಂಚ

ಪ್ರೀತಿಸಿದ ಹುಡುಗಿ ಬೇರೆಯವನೊಂದಿಗೆ ಮದುವೆಯಾಗಿ, ತಾನು ಕೈಹಿಡಿದ ಹುಡುಗಿ ತನ್ನ ಅಧಿಕಪ್ರಸಂಗಿತನಕ್ಕೆ ಬೇಸತ್ತು ವಿಚ್ಛೇದನ ನೀಡಿದ ದಿನ ವಸಂತ ಮಮ್ಮಲ ಮರುಗಿಬಿಟ್ಟ.
ಲೋಕದಲ್ಲೆಲ್ಲೂ ಒಳ್ಳೆಯ ಮನಸ್ಸಿನ ಹೆಂಗಸರೇ ಇಲ್ಲ ಎನ್ನುವ ತೀರ್ಮಾನಕ್ಕೆ ಬಂದ. ಅದುವರೆಗೆ ಫೋಟೋದಲ್ಲಿದ್ದ ದೇವರನ್ನು ಕಣ್ಣೆತ್ತಿ ನೋಡದ ಆತ ಅದೊಂದು ರಾತ್ರಿ ನಿಶ್ಚಲ ಮನಸ್ಸಿನಿಂದ ತಪಸ್ಸಿಗೆ ಕುಳಿತ.
ಹೀಗೆ ಕೆಲ ದಿನಗಳುರುಳಿದವು.. ಈ ಐ.ಟಿ ಯುಗದಲ್ಲೂ ಹಸಿವೆ ನಿದ್ದೆಯನ್ನೆಲ್ಲ ಮೆಟ್ಟಿ ನಿಂತ ವಸಂತನ ದೃಢಚಿತ್ತದಿಂದ ಅಚ್ಚರಿಗೊಂಡ ಭಗವಂತ ಅದೊಂದು ಘಳಿಗೆಯಲ್ಲಿ ಧುತ್ತನೆ ವಸಂತನ ಮುಂದೆ ಪ್ರತ್ಯಕ್ಷನಾದ.
ಏನು ಈ ಯುಗದಲ್ಲೂ ನನಗಾಗಿ ತಪಸ್ಸು ಮಾಡುತ್ತಿರುವೆ? ಎಂದು ಕೇಳಿದ. ಹೆಚ್ಚೇನೂ ಸಂಭ್ರಮ ವ್ಯಕ್ತ ಪಡಿಸದ ವಸಂತ ತಣ್ಣನೆ ಸ್ವರದಲ್ಲಿ ಕೇಳಿದ-ನನಗೆ ವರ ಬೇಕು!
ಭ-ವರವೇ? ಏನದು ಹೇಳು?
ವ-ನಾನು ಹೆಂಗಸರಿಂದ ಬಹಳಷ್ಟು ಸೋತು ಹೋದೆ. ವೈಯಕ್ತಿಕ ಜೀವನದಲ್ಲಿ, ವೃತ್ತಿ ಜೀವನದಲ್ಲಿ...ಏನು ಮಾಡಬೇಕು ಎಂದು ತೋಚುತ್ತಿಲ್ಲ.
ಭ-ಅದು ಅವರವರ ಪ್ರಾರಬ್ಧ ಕರ್ಮ. ಎಷ್ಟೋ ಮಂದಿ ಹೆಂಗಸರಿಂದಾಗಿಯೇ ಒಳ್ಳೆಯ ಬದುಕಿನಲ್ಲಿದ್ದಾರೆ. ನೀನು ಮಾತ್ರ ಹೀಗೆ ಹೇಳುತ್ತಿರುವೆ.
ವ-ನನಗೀಗ ವರವ ಕೊಡು ಭಗವಂತ...ನಾನು ಹೆಂಗಸರೇ ಇಲ್ಲದ ಕಾಲದಲ್ಲಿ, ಅಥವಾ ದೇಶದಲ್ಲಿ, ಅಥವಾ ಜಗತ್ತಿನಲ್ಲಿ ಹುಟ್ಟುವಂತಾಗಬೇಕು.
ಭ-ಇದು ಬಹಳ ಪೇಚಿನ ವರ[ಈ ವರ ಕೊಟ್ಟದ್ದು ತಿಳಿದರೆ ಮಹಿಳಾ ಆಯೋಗದವರ ಕಣ್ಣೂ ಕೆಂಪಾದೀತು]. ಕೊಡುವ ಹಾಗಿಲ್ಲ.
ವ-ಇಲ್ಲ, ಕೊಡಲೇ ಬೇಕು...ನನ್ನ ಭಕ್ತಿಗೆ ಅಷ್ಟಾದರೂ ಬೆಲೆ ಕೊಡಬೇಕು.
ದೇವರಿಗೆ ಈ ಹುಲುಮಾನವ ಒಂದಿಷ್ಟೂ ಬೆದರದೆ ಉತ್ತರಿಸಲು ಕಾರಣವನ್ನು ಕೆಲ ನಿಮಿಷ ಕಾಲ ಚಿಂತಿಸಿದ ದೇವರು ಕೊನೆಗೂ ಈ ಯುಗದಲ್ಲಿ ತಾನು ಮೊದಲ ಬಾರಿ ಪ್ರತ್ಯಕ್ಷವಾಗಿರುವಾಗ ಭಕ್ತನನ್ನು ನಿರಾಸೆಗೊಳಿಸ ಬಾರದು ಎಂದು ತೀರ್ಮಾನಿಸಿ ತಥಾಸ್ತು ಎಂದ. ಆದರೆ ಒಂದು ಷರತ್ತು. ನೀನು ಪ್ರಮೀಳೆಯರಿಲ್ಲದ ಜಗತ್ತಿನಲ್ಲಿ ಹುಟ್ಟಬೇಕಾದರೆ ಮೊದಲು ಈಗಲೇ ಸಾಯಬೇಕು(ಯಾವುದಕ್ಕೂ ಒಂದು ಟೆಸ್ಟ್ ಮಾಡೋಣ ಅನ್ನಿಸಿರಬಹುದು) ಎಂದ.
ಒಪ್ಪಿದ ವಸಂತ ದೇವರಿಗೆ ಥ್ಯಾಂಕ್ಸ್ ಕೂಡಾ ಹೇಳದೆ ಹಿಂದಿರುಗಿದ. ಸಾಯುವುದು ಹೇಗೆ ಎಂದು ಚಿಂತಿಸತೊಡಗಿದ.
ಕೊನೆಗೂ ಸಮುದ್ರಕ್ಕೆ ಹಾರುವುದೇ ಲೇಸು ಎಂದುಕೊಂಡು ಕಡಲತಡಿಗೆ ಹೋದ.
ಅಲ್ಲಿ ನೋಡಿದರೆ ಆಗಲೇ ಒಂದು ಜೀವ ನೀರಲ್ಲಿ ಕೈಕಾಲು ಬಡಿಯುತ್ತಿದೆ...ಮತ್ತೆ ಸಾಯೋಣ ಎಂದು ಅನ್ನಿಸಿ ವಸಂತ ನೀರಿಗೆ ಜಿಗಿದ. ಈಜು ಗೊತ್ತಿದ್ದರಿಂದ ಕೈಕಾಲು ಬಡಿಯುತ್ತಿದ್ದವರನ್ನು ಎಳೆದು ತಂದ.
ನೋಡಿದರೆ ಅದೊಂದು ಹೆಣ್ಣು ಜೀವ. ಆಕೆಯನ್ನು ಪಕ್ಕ ಕೂರಿಸಿ ಕಥೆ ಕೇಳಿದ. ಆಕೆಗೆ ಯಾರೋ ಹುಡುಗ ಕೈಕೊಟ್ಟನಂತೆ, ಅದಕ್ಕೆ ನೀರಿಗೆ ಹಾರಿದಳಂತೆ, ಹಾರಿದ ನಂತರ ಬದುಕಬೇಕು ಅನ್ನಿಸಿತಂತೆ, ಆಗಲೇ ವಸಂತ ಕೈಹಿಡಿನಂತೆ...ಹಾಗೆ ಆಕೆ ಹೇಳುವಾಗ ಆಕೆಯ ಕೈ ವಸಂತನ ಕೈಗಳಲ್ಲಿ ಭದ್ರವಾಗಿತ್ತು. ವಸಂತನಿಗೆ ಸದ್ಯಕ್ಕೆ ಭಗವಂತ ತನಗೆ ನೀಡಿದ ವರ, ಅದಕ್ಕೆ ಹಾಕಿದ ಷರತ್ತು ಮರೆತುಹೋಯಿತು..ಆಕೆಯನ್ನು ಭದ್ರವಾಗಿ ಹಿಡಿದು ಕಡಲ ದಂಡೆಯಲ್ಲಿ ಹೆಜ್ಜೆ ಹಾಕಿದ..
ದೇವಲೋಕದಲ್ಲಿ ಕುಳಿತ ಭಗವಂತ ಮತ್ತು ಆತನ ಸಹವರ್ತಿಗಳು ಕೈಚಪ್ಪಾಳೆ ಹಾಕಿದರು...ಕೊನೆಯಲ್ಲಿ ಭಗವಂತ ಈ ಮಾತು ಹೇಳಿದ 'ಈ ಮೂಢ ಹೆಂಗಸರಿಲ್ಲದ ಪ್ರಪಂಚದಲ್ಲಿ ಬದುಕುವುದು ಅಸಾಧ್ಯ, ನಾನು ಮಾಡಿದ ಪರೀಕ್ಷೆಯಲ್ಲಿ ಸೋತ, ನನ್ನನ್ನು ಅನಾವಶ್ಯಕ ಭೂಮಿಗೆ ಬರಹೇಳಿದ್ದಕ್ಕೆ ಆತನಿಗೆ ಇದೇ ತಕ್ಕ ಶಿಕ್ಷೆ'.
ಹಾಗೆ ಭಗವಂತ ಹೇಳುವಾಗ ನೀರಲ್ಲಿ ಮುಳುಗಿ ಉಪ್ಪುಮಿಶ್ರಿತ ನೀರಿನಿಂದ ಒದ್ದೆಯಾಗಿದ್ದ ಆ ತರುಣಿಯೊಂದಿಗೆ ಬೀಚ್ ಪಕ್ಕದ ದೇವಸ್ಥಾನದಲ್ಲಿ ಕೈಮುಗಿಯಲು ಹೋಗುತ್ತಿದ್ದ!

25 comments:

ಸಾಗರದಾಚೆಯ ಇಂಚರ said...

ವೇಣು,
ಅಂತೂ ಹೆನ್ನಿಲ್ಲದೆ ಜಗತ್ತು ಅಸಾದ್ಯ ಅಂತಿರಾ, ಕಥೆಯನ್ನು ತುಂಬಾ ಸುಂದರವಾಗಿ ಹೆನೆದಿದ್ದಿರಾ,
ಸೊಗಸಾಗಿದೆ, ಹೀಗೆ ಬರೆಯುತ್ತಿರಿ

ಹರೀಶ ಮಾಂಬಾಡಿ said...

ಭಗವಂತನೂ ಕಿಲಾಡಿಯೇ..
ವರದ ಮೂಲಕ ವಸಂತನ ಮನಸ್ಸನ್ನೇ ಬದಲಾಯಿಸಿಬಿಟ್ಟ!
ಹಾಗೆಯೇ ಬಹುತೇಕ ಮಹಿಳಾದ್ವೇಷಿಗಳು ಪೂರ್ಣ ಪ್ರಮಾಣದ ಗೃಹಸ್ತರಾಗ್ತಾರೆ ಅಂದಂತಾಯಿತು.( ಕಟ್ಟಾ ಸೋಶಲಿಸ್ಟರು ವಯಸ್ಸಾದ ಹಾಗೆ ದೊಡ್ಡ ದೊಡ್ಡ ಬಂಡವಾಳಶಾಹಿಗಳಾದಂತೆ :))
ಚೆನ್ನಾಗಿದೆ ಕತೆ

Dr. B.R. Satynarayana said...

ಕಥೆ ಚೆನ್ನಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ನಿಮ್ಮ ಬ್ಲಾಗ್ ಡಿಸೈನ್ ಮತ್ತು ಟೈಟಲ್ ಬಹಳ ಇಷ್ಟವಾದವು. ಗುಡ್ ಲಕ್

PARAANJAPE K.N. said...

ಸೊಗಸಾದ ಕಥೆ.

sunaath said...

ಪಾಪಿ ಸಮುದ್ರ ಹೊಕ್ಕರೂ ಮೊಣಕಾಲ ಕೆಳಗೇ ನೀರು ಅಂತ
ಹೇಳ್ತಾರಲ್ಲ, ಇದಕ್ಕೇ ಇರಬಹುದು!

shivu said...

ವೇಣು,

ಕತೆ ತುಂಬಾ ಚೆನ್ನಾಗಿದೆ...ಇಷ್ಟವಾಯಿತು...

rakesh holla said...

Nice story...

Ranjana Shreedhar said...

ಕತೆ ತುಂಬಾನೇ ಚೆನ್ನಾಗಿದೆ...

ಪ್ರೀತಿಯಿ೦ದ ವೀಣಾ :) said...

Bhagavanta baari bhudivantha
Katte chennagide :)

Shyama Soorya said...

Good creation - shyama

roopa said...

nice story

ಭಾಶೇ said...

Bahala Chennagide kathe.

Nimma blog kooda.

Nannadoo antha ondashtu barediddini. Bandu noodi.

BhaShe

ವಿನಾಯಕ ಭಟ್ಟ said...

ಅದ್ಭುತ ಕತೆ......

ಕೆನೆ Coffee said...

:)

ರಾಜೇಶ್ ನಾಯ್ಕ said...

ಸುಂದರ ಕತೆ. ಎಂಡಿಂಗ್ ಸೂಪರ್.

ಶ್ರೀನಿಧಿ.ಡಿ.ಎಸ್ said...

nice saaar:)

ಜೋಮನ್ said...

ಚೆನ್ನಾಗಿದೆ ವಿನೋದ್

Sree said...

:)

Santhosh said...

liked it...good story....keep posting the good one.

-- Santhosh Ananthapura

ಏಕಾಂತ said...

Bahala chennagide kathe. niroopane kooda.

ಏಕಾಂತ said...

Bahala chennagide kathe. niroopane kooda.

ಧರಿತ್ರಿ said...

ಕಥೆ ಚೆನ್ನಾಗಿದೆ ವೇಣು ಸರ್.
-ಧರಿತ್ರಿ

VENU VINOD said...

ಕಥೆ ಮೆಚ್ಚಿಕೊಂಡ ಎಲ್ಲ ಸನ್ಮಿತ್ರರಿಗೂ ವಂದನೆ, ಕಾರಣಾಂತರಗಳಿಂದ ತಡವಾಗಿ ಪ್ರತಿಕ್ರಿಯಿಸಿದ್ದಕ್ಕೆ ಕ್ಷಮೆ ಕೋರುತ್ತಾ....
-ವೇಣು

shivu said...

ವೇಣು ವಿನೋದ್,

ಇದು ನಿಜಕ್ಕೂ ತುಂಬಾ ಆಸಕ್ತಿಕರವಾದ ಕತೆಯೆನಿಸುತ್ತೆ...ಇಂದಿನ ಸಮಾಜದಲ್ಲಿ ದೇವರ ಉಪಾಯ ಸರಿಯಾಗಿದೆ...

ತೇಜಸ್ವಿನಿ ಹೆಗಡೆ- said...

good one.. liked it..:)

Related Posts Plugin for WordPress, Blogger...